Matthew 10:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;
Kannada BSI Bible 2016
ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು. ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ - ಅನ್ಯಜನಗಳ ಕಡೆಗೆ ಹೋಗಬೇಡಿರಿ, ಸಮಾರ್ಯರ ಊರೊಳಗೆ ಕಾಲಿಡಬೇಡಿರಿ;
Kannada Bible (KNCL) BSI 2016
ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟಿದ್ದೇನೆಂದರೆ: “ಯೆಹೂದ್ಯರಲ್ಲದವರ ಬಳಿಗೆ ಹೋಗಬೇಡಿರಿ, ಸಮಾರ್ಯರ ಊರನ್ನೂ ಪ್ರವೇಶಿಸಬೇಡಿರಿ.