Matthew 11:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಈ ಸಂಗತಿಗಳನ್ನು ಹೇಳಿದ ನಂತರ ಅಲ್ಲಿಂದ ಹೊರಟು ಬೋಧಿಸುವುದಕ್ಕೆ ಮತ್ತು ಉಪದೇಶಿಸುವುದಕ್ಕೆ ಗಲಿಲಾಯ ಪಟ್ಟಣಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.
Kannada BSI Bible 2016
ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಹೇಳಬೇಕಾದದ್ದನ್ನು ಹೇಳಿ ಮುಗಿಸಿದ ಬಳಿಕ ಅಲ್ಲಿಯವರ ಊರುಗಳಲ್ಲಿ ಉಪದೇಶಮಾಡುವದಕ್ಕೂ ಸುವಾರ್ತೆಯನ್ನು ಸಾರುವದಕ್ಕೂ ಅಲ್ಲಿಂದ ಹೊರಟನು.
Kannada Bible (KNCL) BSI 2016
ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶ ಕೊಟ್ಟಾದ ಮೇಲೆ, ಗಲಿಲಾಯ ಪ್ರದೇಶದ ಪಟ್ಟಣಗಳಲ್ಲಿ ಬೋಧಿಸುವುದಕ್ಕೂ ಶುಭವರ್ತಮಾನವನ್ನು ಸಾರುವುದಕ್ಕೂ ಅಲ್ಲಿಂದ ಹೊರಟು ಹೋದರು.