Matthew 11:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಹಾನನನ್ನು ಕುರಿತು ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ.
Kannada BSI Bible 2016
ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸರಿಮಾಡುವನು ಎಂದು ಯಾರ ವಿಷಯವಾಗಿ ಬರೆದದೆಯೋ ಆ ಪುರುಷನು ಇವನೇ.
Kannada Bible (KNCL) BSI 2016
‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು’ ಎಂದು ಪವಿತ್ರಗ್ರಂಥದಲ್ಲಿ ಉಲ್ಲೇಖಿಸಿರುವುದು ಈ ಯೊವಾನ್ನನನ್ನು ಕುರಿತೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಹಾನನ ಕುರಿತು ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ.’