Matthew 11:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ನಾನಿಕ ಯೋಹಾನನು ಬಂದ ಸಮಯದಿಂದ ಇಲ್ಲಿಯವರೆಗೂ ಪರಲೋಕರಾಜ್ಯ ಪ್ರಬಲವಾದ ಆಕ್ರಮಣಗಳಿಗೆ ಒಳಗಾಗಿದೆ. ಬಲಾತ್ಕಾರವನ್ನು ಉಪಯೋಗಿಸಿ ಜನರು ರಾಜ್ಯವನ್ನು ಪಡೆದುಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.
Kannada BSI Bible 2016
ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸ್ನಾನಿಕನಾದ ಯೋಹಾನನ ಕಾಲದಿಂದ ಈವರೆಗೂ ಪರಲೋಕರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿರುತ್ತದೆ; ಬಲಾತ್ಕಾರಿಗಳು ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳುತ್ತಾರೆ.
Kannada Bible (KNCL) BSI 2016
ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರೆಗೆ ಸ್ವರ್ಗಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.