Matthew 11:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಂದಿನ ಜನರು ಈ ಮಕ್ಕಳಂತಿದ್ದಾರೆ ಎಂದು ನಾನು ಹೇಳಿದ್ದೇಕೆ? ಏಕೆಂದರೆ ಯೋಹಾನನು ಬಂದನು. ಆದರೆ ಅವನು ಬೇರೆ ಜನರಂತೆ ಊಟಮಾಡಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ಜನರು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.
Kannada BSI Bible 2016
ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ಯೋಹಾನನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳದವನಾಗಿದ್ದನು; ಅವರು ಅವನಿಗೆ - ದೆವ್ವ ಹಿಡಿದದೆ ಅನ್ನುತ್ತಾರೆ.
Kannada Bible (KNCL) BSI 2016
ಏಕೆಂದರೆ, ಯೊವಾನ್ನನು ಬಂದನು; ಅವನು ಅನ್ನಪಾನೀಯವನ್ನು ಸೇವಿಸಲಿಲ್ಲ. ಅದಕ್ಕೆ, ‘ಇವನಿಗೆ ದೆವ್ವ ಹಿಡಿದಿದೆ’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಏಕೆಂದರೆ ಯೋಹಾನನು ಅನ್ನಪಾನಗಳನ್ನು ತೆಗೆದುಕೊಳ್ಳಲಿಲ್ಲ. ಅದಕ್ಕೆ ಅವರು, ‘ಅವನಿಗೆ ದೆವ್ವ ಹಿಡಿದಿದೆ,’ ಎಂದರು.