Matthew 11:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನುಷ್ಯಕುಮಾರನು ಬಂದನು. ಆತನು ಬೇರೆ ಜನರಂತೆ ಊಟಮಾಡುತ್ತಾನೆ; ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ಜನರು, ‘ನೋಡಿರಿ! ಅವನು ಹೊಟ್ಟೆಬಾಕ, ಅವನು ಕುಡುಕ, ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಅವನ ಸ್ನೇಹಿತರಾಗಿದ್ದಾರೆ’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕ್ರಿಯೆಗಳಿಂದಲೇ ತನ್ನ ಯೋಗ್ಯತೆಯನ್ನು ತೋರ್ಪಡಿಸುತ್ತದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರ ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.
Kannada BSI Bible 2016
ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯಕುಮಾರನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ಅವರು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತಾರೆ. ಆದರೆ ಜ್ಞಾನವು ತನ್ನ ಕೆಲಸಗಳಿಂದ ಜ್ಞಾನವೇ ಎಂದು ಗೊತ್ತಾಗುವದು ಅಂದನು.
Kannada Bible (KNCL) BSI 2016
ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು. ಅದಕ್ಕೆ ಅವರು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕೃತ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದು ಹೇಳಿದರು.