Matthew 11:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೇಸು, ತಾನು ಯಾವ ಪಟ್ಟಣಗಳಲ್ಲಿ ಹೇರಳವಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನೋ ಆ ಪಟ್ಟಣಗಳನ್ನು ಖಂಡಿಸಿದನು. ಏಕೆಂದರೆ ಆ ಪಟ್ಟಣಗಳಲ್ಲಿದ್ದ ಜನರು ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳಲಿಲ್ಲ ಮತ್ತು ಪಾಪ ಮಾಡುವುದನ್ನು ನಿಲ್ಲಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
Kannada BSI Bible 2016
ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳು ದೇವರ ಕಡೆಗೆ ತಿರುಗಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
Kannada Bible (KNCL) BSI 2016
ಯಾವ ಪಟ್ಟಣಗಳಲ್ಲಿ ಯೇಸುಸ್ವಾಮಿ ಅದ್ಭುತಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ. ಆದ್ದರಿಂದ ಆ ಪಟ್ಟಣಗಳನ್ನು ಯೇಸು ಖಂಡಿಸಿದರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ತಮ್ಮ ಹೆಚ್ಚಾದ ಮಹತ್ಕಾರ್ಯಗಳು ನಡೆದ ಪಟ್ಟಣಗಳು, ದೇವರ ಕಡೆಗೆ ತಿರುಗಿಕೊಳ್ಳದೆ ಇದ್ದುದರಿಂದ ಯೇಸು ಅವುಗಳನ್ನು ಗದರಿಸತೊಡಗಿ,