Matthew 11:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೈ ಕಪೆರ್ನೌಮೇ ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.
Kannada BSI Bible 2016
ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋವಿುನಲ್ಲಿ ನಡೆದಿದ್ದರೆ ಅದು ಇಂದಿನವರೆಗೂ ಉಳಿಯುತ್ತಿತ್ತು.
Kannada Bible (KNCL) BSI 2016
ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು.