Matthew 11:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
Kannada BSI Bible 2016
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.
Kannada Bible (KNCL) BSI 2016
ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.