Matthew 11:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.
Kannada BSI Bible 2016
ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;
Kannada Bible (KNCL) BSI 2016
ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.