Matthew 11:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಜವಾಗಿಯೂ ನೀವು ಏನನ್ನು ನೋಡುವುದಕ್ಕೆ ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡಿರುವ ಮನುಷ್ಯನನ್ನೋ? ಇಲ್ಲ! ನಯವಾದ ಉಡುಪನ್ನು ಹಾಕಿಕೊಂಡಿರುವ ಜನರು ರಾಜರ ಅರಮನೆಗಳಲ್ಲಿ ವಾಸಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.
Kannada BSI Bible 2016
ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಹೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಉಟ್ಟುಕೊಂಡವರು ಅರಮನೆಗಳಲ್ಲಿ ಇರುತ್ತಾರಷ್ಟೆ.
Kannada Bible (KNCL) BSI 2016
ಇಲ್ಲವಾದರೆ, ಏಕೆ ಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿದ್ದ ವ್ಯಕ್ತಿಯನ್ನು ನೋಡಲು ಹೋದಿರೇನು? ಅಂತಹ ಉಡುಗೆ ತೊಡುಗೆ ಧರಿಸುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸುವವರು ರಾಜರ ಅರಮನೆಗಳಲ್ಲಿ ಇರುತ್ತಾರೆ.