Matthew 11:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಾಗಾದರೆ, ಏನನ್ನು ನೋಡಲು ಹೋಗಿದ್ದಿರಿ? ಒಬ್ಬ ಪ್ರವಾದಿಯನ್ನೋ? ಹೌದು! ಯೋಹಾನನು ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.
Kannada BSI Bible 2016
ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವದಕ್ಕೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ ಎಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ಹಾಗಾದರೆ ಯಾವ ಉದ್ದೇಶದಿಂದ ಹೋದಿರಿ? ಪ್ರವಾದಿಯನ್ನು ನೋಡಲೆಂದೋ ಹೌದು ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ ಎಂಬುದು ನಿಜ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ.