Matthew 12:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂದು ಸಬ್ಬತ್ ದಿನ. ಯೇಸು ಧಾನ್ಯದ ಹೊಲಗಳ ಮಾರ್ಗವಾಗಿ ನಡೆದುಹೋಗುತ್ತಿದ್ದನು. ಯೇಸುವಿನ ಶಿಷ್ಯರು ಆತನೊಂದಿಗಿದ್ದರು. ಅವರು ಹಸಿದಿದ್ದರು. ಆದ್ದರಿಂದ ಶಿಷ್ಯರು ತೆನೆಗಳನ್ನು ಕಿತ್ತುಕೊಂಡು ತಿನ್ನತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
Kannada BSI Bible 2016
ಆ ಸಮಯದಲ್ಲಿ ಯೇಸು ಸಬ್ಬತ್‌ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದು ತೆನೆಗಳನ್ನು ಮುರುಕೊಂಡು ತಿನ್ನುತ್ತಿದ್ದರು.
Kannada Bible (KNCL) BSI 2016
ಒಂದು ಸಬ್ಬತ್ ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಸಂಗಡವಿದ್ದ ಶಿಷ್ಯರಿಗೆ ಹಸಿವಾಯಿತು. ಅವರು ಗೋದಿಯ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಒಂದು ಸಬ್ಬತ್ ದಿನ ಪೈರಿನ ಹೊಲವನ್ನು ಹಾದುಹೋಗುತ್ತಿದ್ದಾಗ, ಅವರ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.