Matthew 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಭಾಮಂದಿರದಲ್ಲಿ ಒಬ್ಬನ ಕೈ ಊನವಾಗಿತ್ತು. ಯೆಹೂದ್ಯರಲ್ಲಿ ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸುವುದಕ್ಕಾಗಿ ಕಾರಣ ಹುಡುಕುತ್ತಿದ್ದರು. ಆದ್ದರಿಂದ ಅವರು ಯೇಸುವಿಗೆ “ಸಬ್ಬತ್‌ದಿನದಲ್ಲಿ ಗುಣಪಡಿಸುವುದು ಸರಿಯೇ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು.
Kannada BSI Bible 2016
ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ಆತನ ಮೇಲೆ ತಪ್ಪುಹೊರಿಸಬೇಕೆಂದು ಆತನನ್ನು - ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ಸರಿಯೋ ಎಂದು ಕೇಳಿದರು.
Kannada Bible (KNCL) BSI 2016
ಬತ್ತಿದ ಕೈಯುಳ್ಳ ಒಬ್ಬ ವ್ಯಕ್ತಿ ಅಲ್ಲಿದ್ದನು. ಯೇಸುವಿನ ಮೇಲೆ ತಪ್ಪುಹೊರಿಸುವ ಉದ್ದೇಶದಿಂದ ಕೆಲವರು, “ಸಬ್ಬತ್ ದಿನ ಸ್ವಸ್ಥಗೊಳಿಸುವುದು ಶಾಸ್ತ್ರಬದ್ಧವೇ?\ ಎಂದು ಯೇಸುವನ್ನು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. ಆಗ ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯಸಮ್ಮತವೋ?” ಎಂದು ಕೇಳಿದರು.