Matthew 12:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನಿಮ್ಮಲ್ಲಿ ಯಾರ ಬಳಿಯಾದರೂ ಒಂದು ಕುರಿಯಿದ್ದು, ಆ ಕುರಿಯು ಸಬ್ಬತ್ ದಿನದಂದು ಕುಣಿಯೊಳಕ್ಕೆ ಬಿದ್ದರೆ, ನೀವು ಆ ಕುರಿಯನ್ನು ಕುಣಿಯಿಂದ ಮೇಲಕ್ಕೆ ಎತ್ತುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕಾತನು, “ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ?
Kannada BSI Bible 2016
ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್‌ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕಾತನು - ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ತೆಗೆಯದೆ ಇರುವನೇ?
Kannada Bible (KNCL) BSI 2016
ಅದಕ್ಕೆ ಯೇಸು, “ನಿಮ್ಮಲ್ಲಿ ಒಬ್ಬನಿಗೆ ಒಂದೇ ಒಂದು ಕುರಿಯಿದೆ ಎನ್ನೋಣ. ಸಬ್ಬತ್ ದಿನ ಅದು ಗುಣಿಯಲ್ಲಿ ಬಿದ್ದುಹೋಯಿತು ಎನ್ನೋಣ; ಆ ದಿನ ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ, ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ?