Matthew 12:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೇಸು ಕೈ ಊನವಾಗಿದ್ದ ಮನುಷ್ಯನಿಗೆ, “ನಿನ್ನ ಕೈ ತೋರಿಸು” ಎಂದನು. ಅವನು ತನ್ನ ಕೈಯನ್ನು ಆತನ ಕಡೆಗೆ ಚಾಚಿದನು. ಕೂಡಲೇ, ಅವನ ಕೈ ಮತ್ತೊಂದು ಕೈಯಂತೆ ಸರಿಯಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೇಸು ಆ ಮನುಷ್ಯನಿಗೆ “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.
Kannada BSI Bible 2016
ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕೈ ಚಾಚು ಎಂದು ಹೇಳಿದನು; ಅವನು ಚಾಚಿದನು. ಅದು ಸಂಪೂರ್ಣ ವಾಸಿಯಾಗಿ ಮತ್ತೊಂದರ ಹಾಗಾಯಿತು.
Kannada Bible (KNCL) BSI 2016
ಅನಂತರ ಬತ್ತಿದ ಕೈಯುಳ್ಳವನನ್ನು ನೋಡಿ, “ಕೈಚಾಚು” ಎಂದರು. ಅವನು ಚಾಚಿದನು. ಅದು ಪುನಶ್ಚೇತನಗೊಂಡು ಇನ್ನೊಂದು ಕೈಯ ಹಾಗೆ ಸಂಪೂರ್ಣ ಸ್ವಸ್ಥವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದರು. ಅವನು ಕೈಚಾಚಿದಾಗ ಅದು ಸಂಪೂರ್ಣ ವಾಸಿಯಾಗಿ ಇನ್ನೊಂದು ಕೈಯಂತೆಯೇ ಆಯಿತು.