Matthew 12:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದನ್ನು ಕಂಡ ಫರಿಸಾಯರು ಯೇಸುವಿಗೆ, “ನೋಡು! ಸಬ್ಬತ್‌ದಿನದಂದು ಮಾಡತಕ್ಕ ಕಾರ್ಯಗಳನ್ನು ಕುರಿತು ಯೆಹೂದ್ಯರ ಧರ್ಮಶಾಸ್ತ್ರದಲ್ಲಿ ವಿಧಿಸಿರುವ ನಿಯಮಗಳಿಗೆ ವಿರುದ್ಧವಾಗಿ ನಿನ್ನ ಶಿಷ್ಯರು ಮಾಡುತ್ತಿದ್ದಾರೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಫರಿಸಾಯರು ಅದನ್ನು ಕಂಡು, “ನೋಡು ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ” ಎಂದು ಆತನಿಗೆ ಹೇಳಿದರು.
Kannada BSI Bible 2016
ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್‌ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರಿಸಾಯರು ಅದನ್ನು ಕಂಡು - ನೋಡು, ನಿನ್ನ ಶಿಷ್ಯರು ಸಬ್ಬತ್‍ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ ಎಂದು ಆತನಿಗೆ ಹೇಳಿದರು.
Kannada Bible (KNCL) BSI 2016
ಇದನ್ನು ಕಂಡ ಫರಿಸಾಯರು, “ನೋಡು, ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಷಿದ್ಧವಾದುದನ್ನು ಮಾಡುತ್ತಿದ್ದಾರೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರಿಸಾಯರು ಅದನ್ನು ಕಂಡು ಯೇಸುವಿಗೆ, “ಇಗೋ, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಮಾಡುತ್ತಿದ್ದಾರೆ,” ಎಂದರು.