Matthew 12:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲು ಸೈತಾನನು ತನ್ನ ಸ್ವಂತ ದೆವ್ವಗಳನ್ನೇ ಹೊರಗೆ ಓಡಿಸಿದರೆ ಅವನು ತನ್ನಲ್ಲಿಯೇ ಒಡಕನ್ನು ಮಾಡಿದಂತಾಯಿತು. ಆಗ ಅವನು ಮತ್ತು ಅವನ ರಾಜ್ಯವು ಸ್ಥಿರವಾಗಿರಲು ಹೇಗೆ ಸಾಧ್ಯ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು, ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು?
Kannada BSI Bible 2016
ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನಲ್ಲಿ ಭೇದ ಹುಟ್ಟಿಸಿಕೊಂಡ ಹಾಗಾಯಿತು.
Kannada Bible (KNCL) BSI 2016
ಸೈತಾನನು ಸೈತಾನನನ್ನು ಹೊಡೆದೋಡಿಸುವುದಾದರೆ, ಸೈತಾನನ ಪಕ್ಷದವರೇ ಪರಸ್ಪರ ವಿರೋಧಿಗಳಾಗುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಓಡಿಸಿದರೆ, ಅವನು ತನಗೆ ವಿರೋಧವಾಗಿ ವಿಭಾಗವಾಗಿರುವನು. ಹಾಗಾದರೆ ಅವನ ರಾಜ್ಯವು ನಿಲ್ಲುವುದು ಹೇಗೆ?