Matthew 12:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಸೈತಾನನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತೇನೆ ಎಂದು ನೀವು ಹೇಳುತ್ತೀರಿ. ಅದು ನಿಜವಾದರೆ, ನಿಮ್ಮ ಜನರು ಯಾವ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನ್ನು ತಪ್ಪಿತಸ್ಥರೆಂದು ನಿರೂಪಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
Kannada BSI Bible 2016
ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ಅವನ ರಾಜ್ಯವು ಹೇಗೆ ಉಳಿದೀತು? ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವವರಾಗುವರು.
Kannada Bible (KNCL) BSI 2016
ಆಗ ಅವನ ರಾಜ್ಯ ಹೇಗೆ ತಾನೇ ಉಳಿದೀತು? ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಜನರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.