Matthew 12:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಬೋಧಕನೇ, ನೀನು ಹೇಳಿದ್ದನ್ನು ನಿರೂಪಿಸುವುದಕ್ಕಾಗಿ ಒಂದು ಸೂಚಕಕಾರ್ಯವನ್ನು ಮಾಡು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, “ಬೋಧಕನೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು” ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ,
Kannada BSI Bible 2016
ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು - ಬೋಧಕನೇ, ನಿನ್ನಿಂದಾಗುವ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು ನಮಗೆ ಅಪೇಕ್ಷೆಯದೆ ಎಂದು ಆತನನ್ನು ಕೇಳಲಾಗಿ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ -
Kannada Bible (KNCL) BSI 2016
ಬಳಿಕ ಕೆಲವುಮಂದಿ ಧರ್ಮಶಾಸ್ತ್ರಿಗಳೂ ಫರಿಸಾಯರೂ ಯೇಸುಸ್ವಾಮಿಯನ್ನು ಉದ್ದೇಶಿಸಿ, “ಬೋಧಕರೇ, ನೀವು ಒಂದು ಸೂಚಕಕಾರ್ಯ ಮಾಡುವುದನ್ನು ನೋಡಬೇಕೆಂದಿದ್ದೇವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಿಯಮ ಬೋಧಕರೂ ಫರಿಸಾಯರೂ, “ಬೋಧಕರೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ಕಾಣಬೇಕೆಂದಿದ್ದೇವೆ,” ಎಂದು ಕೇಳಿದರು.