Matthew 12:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ದುಷ್ಟರು ಮತ್ತು ಪಾಪಿಗಳು ಸೂಚಕಕಾರ್ಯವನ್ನು ಅಪೇಕ್ಷಿಸುತ್ತಾರೆ. ಆದರೆ ಅವರಿಗೆ ಒಂದು ಸೂಚಕಕಾರ್ಯವನ್ನೂ ಗುರುತಿಗಾಗಿ ತೋರಿಸಲಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ.
Kannada BSI Bible 2016
ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ.
Kannada Bible (KNCL) BSI 2016
ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: “ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಉತ್ತರವಾಗಿ ಅವರಿಗೆ, “ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ.