Matthew 12:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.
Kannada BSI Bible 2016
ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಕ್ಷಿಣದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ.
Kannada Bible (KNCL) BSI 2016
ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.