Matthew 12:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದುರಾತ್ಮವು ಮನುಷ್ಯನಿಂದ ಹೊರಗೆ ಬಂದಾಗ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಪ್ರಯಾಣ ಮಾಡುತ್ತದೆ. ಆದರೆ ಆ ದುರಾತ್ಮಕ್ಕೆ ಬೇಕಾದ ವಿಶ್ರಾಂತಿ ಸ್ಥಳ ಸಿಕ್ಕುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.
Kannada BSI Bible 2016
ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.
Kannada Bible (KNCL) BSI 2016
“ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದಾಗ, ಅದು, ‘ನಾನು ಬಿಟ್ಟುಬಂದ ಮನೆಗೆ ಹಿಂದಿರುಗುತ್ತೇನೆ’ ಎಂದು ಹೇಳಿಕೊಳ್ಳುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ, ಅದು,