Matthew 12:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅದು, ‘ನಾನು ಬಿಟ್ಟುಬಂದ ಮನೆಗೇ ಹಿಂತಿರುಗಿ ಹೋಗುತ್ತೇನೆ’ ಎಂದು ಅಂದುಕೊಳ್ಳುತ್ತದೆ. ಬಳಿಕ ಅದು ಅವನ ಬಳಿಗೆ ಮತ್ತೆ ಬಂದಾಗ ಆ ಮನೆಯು ಇನ್ನೂ ಬರಿದಾಗಿರುತ್ತದೆ. ಚೊಕ್ಕಟವಾಗಿ ಗುಡಿಸಿ ಅಲಂಕರಿಸಲ್ಪಟ್ಟಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದೂ, ಗುಡಿಸಿ, ಅಲಂಕರಿಸಿರುವುದನ್ನು ಕಂಡು,
Kannada BSI Bible 2016
ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಶ್ರಾಂತಿ ಸಿಕ್ಕದ ಕಾರಣ ಅದು - ನಾನು ಬಿಟ್ಟು ಬಂದ ನನ್ನ ಮನೆಗೆ ತಿರಿಗಿ ಹೋಗುತ್ತೇನೆ ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದೂ ಗುಡಿಸಿ ಅಲಂಕರಿಸಿದ್ದೂ ಆಗಿರುವದನ್ನು ಕಂಡು ಹೊರಟುಹೋಗಿ
Kannada Bible (KNCL) BSI 2016
ಅದು ಮರಳಿ ಬಂದಾಗ, ಮನೆ ಬರಿದಾಗಿರುವುದನ್ನೂ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟ ಆಗಿರುವುದನ್ನೂ ಕಾಣುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು, ಆ ಮನೆಯು ಬರಿದಾಗಿಯೂ ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.