Matthew 12:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅದು ಹೊರಗೆ ಹೋಗಿ ತನಗಿಂತಲೂ ಹೆಚ್ಚು ದುಷ್ಟರಾದ ಏಳು ದುರಾತ್ಮಗಳನ್ನು ಕರೆದುಕೊಂಡು ಬರುತ್ತದೆ. ಆ ದುರಾತ್ಮಗಳೆಲ್ಲಾ ಆ ಮನುಷ್ಯನೊಳಗೆ ಸೇರಿಕೊಂಡು ವಾಸಮಾಡಲಾರಂಭಿಸುತ್ತವೆ. ಆಗ ಆ ಮನುಷ್ಯನಿಗೆ ಮೊದಲಿಗಿಂತಲೂ ಹೆಚ್ಚಿನ ಕಷ್ಟಗಳು ಉಂಟಾಗುತ್ತವೆ. ಈ ದಿನಗಳಲ್ಲಿ ಜೀವಿಸುವ ದುಷ್ಟ ಜನರಿಗೆ ಅದೇ ರೀತಿ ಆಗುವುದು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು” ಅಂದನು.
Kannada BSI Bible 2016
ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು.
Kannada Bible (KNCL) BSI 2016
ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು.