Matthew 12:46 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವು ಜನರೊಂದಿಗೆ ಮಾತಾಡುತ್ತಿರುವಾಗ, ಆತನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡರು. ಅವರು ಆತನೊಂದಿಗೆ ಮಾತಾಡಬೇಕೆಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.
Kannada BSI Bible 2016
ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಜನರ ಗುಂಪುಗಳ ಸಂಗಡ ಇನ್ನೂ ಮಾತಾಡುತ್ತಿರುವಾಗ ಆತನ ತಾಯಿಯೂ ಸಹೋದರರೂ ಆತನನ್ನು ಮಾತಾಡಿಸಬೇಕೆಂದು ಹೊರಗೆ ನಿಂತಿದ್ದರು.
Kannada Bible (KNCL) BSI 2016
ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇನ್ನೂ ಜನರ ಸಂಗಡ ಮಾತನಾಡುತ್ತಿದ್ದಾಗ, ಅವರ ತಾಯಿ ಮತ್ತು ಸಹೋದರರು ಅವರೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.