Matthew 12:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಂದು ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಮೀರಿದರೂ ತಪ್ಪಿತಸ್ಥರಾಗುವುದಿಲ್ಲವೆಂದು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಲಿಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?
Kannada BSI Bible 2016
ಇದಲ್ಲದೆ ಸಬ್ಬತ್ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ವಿುಕ್ಕಾದ ದಿನಗಳಂತೆ ಮಾಡಿದಾಗ್ಯೂ ಅವರು ತಪ್ಪಿಗೆ ಗುರಿಯಾಗುವದಿಲ್ಲ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?
Kannada Bible (KNCL) BSI 2016
ಇದಲ್ಲದೆ, ಪ್ರತಿಯೊಂದು ಸಬ್ಬತ್ ದಿನವೂ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಉಲ್ಲಂಘಿಸಿಯೂ ನಿರ್ದೋಷಿಗಳಾಗಿದ್ದಾರೆ. ಇದನ್ನು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಿಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಉಲ್ಲಂಘಿಸಿದರೂ ನಿರ್ದೋಷಿಗಳಾಗಿದ್ದಾರೆಂದು ನೀವು ನಿಯಮದಲ್ಲಿ ಓದಲಿಲ್ಲವೇ?