Matthew 12:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪಶುಯಜ್ಞಗಳು ನನಗೆ ಬೇಡ, ಕರುಣೆಯೇ ನನಗೆ ಬೇಕು” ಎಂದು ಪವಿತ್ರಗ್ರಂಥವು ಹೇಳುತ್ತದೆ. ಅದರ ಅರ್ಥವನ್ನು ನೀವು ನಿಜವಾಗಿಯೂ ಅರಿತಿಲ್ಲ. ನೀವು ಅದರ ಅರ್ಥವನ್ನು ತಿಳಿದುಕೊಂಡರೆ ತಪ್ಪನ್ನೇನೂ ಮಾಡದ ಇವರಿಗೆ ತಪ್ಪಿತಸ್ಥರೆಂದು ತೀರ್ಪು ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ.
Kannada BSI Bible 2016
ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರುಣೆಯೇಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪು ಮಾಡುತ್ತಿದ್ದಿಲ್ಲ.
Kannada Bible (KNCL) BSI 2016
‘ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂಬ ವಾಕ್ಯದ ಅರ್ಥ ನಿಮಗೆ ತಿಳಿದಿದ್ದರೆ, ನಿರ್ದೋಷಿಗಳನ್ನು ನೀವು ಖಂಡಿಸುತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ, ನಿರಪರಾಧಿಗಳನ್ನು ಖಂಡಿಸುತ್ತಿರಲಿಲ್ಲ.