Matthew 13:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ವಲ್ಪ ಜ್ಞಾನವನ್ನು ಹೊಂದಿರುವವನು ಇನ್ನೂ ಹೆಚ್ಚು ಜ್ಞಾನವನ್ನು ಪಡೆದುಕೊಂಡು ಸಾಕಷ್ಟು ಜ್ಞಾನವಂತನಾಗುವನು. ಆದರೆ ಜ್ಞಾನವನ್ನು ಹೊಂದಿಲ್ಲದವನು ತನಗಿರುವ ಸ್ವಲ್ಪ ಜ್ಞಾನವನ್ನೂ ಕಳೆದುಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
Kannada BSI Bible 2016
ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಇದ್ದವನಿಗೆ ಕೊಡಲ್ಪಡುವದು, ಅವನಿಗೆ ಮತ್ತೂ ಹೆಚ್ಚಾಗುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
Kannada Bible (KNCL) BSI 2016
ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು.”