Matthew 13:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಂಥವರ ಬಗ್ಗೆ ಯೆಶಾಯನು ಹೇಳಿದ್ದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.
Kannada BSI Bible 2016
ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ; ಅದೇನಂದರೆ - ನೀವು ಕಿವಿಯಿದ್ದು ಕೇಳಿದರೂ ತಿಳುಕೊಳ್ಳುವದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವದೇ ಇಲ್ಲ.
Kannada Bible (KNCL) BSI 2016
ಪ್ರವಾದಿ ಯೆಶಾಯನ ಈ ಪ್ರವಚನ ಅವರಲ್ಲಿ ಈಡೇರುತ್ತದೆ. ‘ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನೆಂದರೆ, “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.