Matthew 13:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೌದು, ಇವರ ಮನಸ್ಸುಗಳು ಕಠಿಣವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.
Kannada BSI Bible 2016
ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗುಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದು.
Kannada Bible (KNCL) BSI 2016
ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ. ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.