Matthew 13:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಈಗ ನೋಡುವ ಸಂಗತಿಗಳನ್ನು ನೋಡಲು ಮತ್ತು ಈಗ ನೀವು ಕೇಳುವ ಸಂಗತಿಗಳನ್ನು ಕೇಳಲು ಅನೇಕ ಪ್ರವಾದಿಗಳು ಮತ್ತು ಒಳ್ಳೆಯ ಜನರು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.
Kannada BSI Bible 2016
ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ ಸತ್ಪುರುಷರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ; ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಿಲ್ಲ.
Kannada Bible (KNCL) BSI 2016
ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು. ಆದರೆ ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂಬುದು ನಿಮಗೆ ತಿಳಿದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸತ್ಯವಾಗಿ ನಿಮಗೆ ಹೇಳುತ್ತೇನೆ, ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೀವು ಕಾಣುವಂಥವುಗಳನ್ನು ಕಾಣಬೇಕೆಂದು ಅಪೇಕ್ಷಿಸಿದರೂ ಕಾಣಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ.