Matthew 13:19 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.
Kannada BSI Bible 2016
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
Kannada Bible (KNCL) BSI 2016
ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.