Matthew 13:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬಂಡೆನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಅಂಗೀಕರಿಸುವ ಮನುಷ್ಯನೇ ಬೀಜ ಬಿದ್ದ ಬಂಡೆನೆಲವಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,
Kannada BSI Bible 2016
ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾನೆ;
Kannada Bible (KNCL) BSI 2016
ಬೇರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಲ್ಲು ನೆಲದ ಮೇಲೆ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.