Matthew 13:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.
Kannada BSI Bible 2016
ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿ ಬೀಳುತ್ತಾನೆ; ಇವನೇ ಬೀಜ ಬಿದ್ದ ಬಂಡೆಯ ನೆಲವಾಗಿರುವವನು.
Kannada Bible (KNCL) BSI 2016
ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.