Matthew 13:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.
Kannada BSI Bible 2016
ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ವಾಕ್ಯವನ್ನು ಕೇಳಿ ತಿಳುಕೊಂಡು ಫಲವಂತನಾಗಿ ನೂರರಷ್ಟಾಗಲಿ ಅರುವತ್ತರಷ್ಟಾಗಲಿ ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ; ಇವನೇ ಒಳ್ಳೆಯ ನೆಲವಾಗಿರುವವನು ಎಂದು ಹೇಳಿದನು.
Kannada Bible (KNCL) BSI 2016
ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.”