Matthew 13:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಆ ರೈತನ ಸೇವಕರು ಅವನ ಬಳಿಗೆ ಬಂದು, ‘ನಿನ್ನ ಹೊಲದಲ್ಲಿ ನೀನು ಒಳ್ಳೆಯ ಬೀಜ ಬಿತ್ತಿದೆ. ಹಣಜಿ ಎಲ್ಲಿಂದ ಬಂತು?’ ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು.
Kannada BSI Bible 2016
ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು - ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜ ಬಿತ್ತಿದಿಯಲ್ಲಾ; ಹಣಜಿ ಎಲ್ಲಿಂದ ಬಂತು ಎಂದು ಕೇಳಲು
Kannada Bible (KNCL) BSI 2016
ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, ‘ಸ್ವಾಮೀ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯೂ ಕಾಣಿಸಿಕೊಂಡಿದೆಯಲ್ಲಾ. ಅದೆಲ್ಲಿಂದ ಬಂತು?’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನೆಯ ಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, ‘ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದೆಯಲ್ಲಾ? ಆದರೆ ಈ ಕಳೆಯು ಎಲ್ಲಿಂದ ಬಂತು?’ ಎಂದು ಕೇಳಿದರು.