Matthew 13:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ಮನುಷ್ಯನು, ‘ಒಬ್ಬ ವೈರಿ ಹಣಜಿಯನ್ನು ಬಿತ್ತಿದ್ದಾನೆ’ ಎಂದು ಉತ್ತರಕೊಟ್ಟನು. “ಆ ಸೇವಕರು ‘ನಾವು ಹೋಗಿ ಹಣಜಿಗಳನ್ನು ಕೀಳಬೇಕೆ?’ ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು.
Kannada BSI Bible 2016
ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ಇದು ಒಬ್ಬ ವೈರಿ ಮಾಡಿದ ಕೆಲಸ ಅನ್ನಲಾಗಿ ಆಳುಗಳು ಅವನನ್ನು - ಹಾಗಾದರೆ ನಾವು ಅದನ್ನು ಆರಿಸಿ ತೆಗೆಯೋಣೋ ಎಂದು ಕೇಳಲು
Kannada Bible (KNCL) BSI 2016
ಯಜಮಾನ, ‘ಇದು ನನ್ನ ವೈರಿ ಮಾಡಿರುವ ಕೆಲಸ,’ ಎಂದ. ‘ಹಾಗಾದರೆ, ಕಳೆಯನ್ನು ಕಿತ್ತುಹಾಕೋಣವೇ’ ಎಂದರು ಆಳುಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಜಮಾನನು ಅವರಿಗೆ, ‘ವೈರಿಯು ಇದನ್ನು ಮಾಡಿದ್ದಾನೆ,’ ಎಂದನು. “ಆಗ ಸೇವಕರು ಅವನಿಗೆ, ‘ನಾವು ಹೋಗಿ ಅವುಗಳನ್ನು ಕಿತ್ತುಹಾಕೋಣವೇ?’ ಎಂದು ಕೇಳಿದರು.