Matthew 13:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.
Kannada BSI Bible 2016
ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಗ್ಗೀಕಾಲದ ತನಕ ಎರಡೂ ಕೂಡ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ - ಮೊದಲು ಹಣಜಿಯನ್ನು ಆರಿಸಿತೆಗೆದು ಅದನ್ನು ಸುಡುವದಕ್ಕೆ ಹೊರೆಕಟ್ಟಿಹಾಕಿ, ಗೋದಿಯನ್ನು ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು ಅಂದನು.
Kannada Bible (KNCL) BSI 2016
ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು.”