Matthew 13:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೇಸು ಜನರಿಗೆ ಮತ್ತೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯ ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ತನ್ನ ಹೊಲದಲ್ಲಿ ಬಿತ್ತಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.
Kannada BSI Bible 2016
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.
Kannada Bible (KNCL) BSI 2016
ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು, ಒಬ್ಬ ಮನುಷ್ಯನು ಸಾಸಿವೆ ಕಾಳನ್ನು ತೆಗೆದುಕೊಂಡುಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದಕ್ಕೆ ಹೋಲಿಕೆಯಾಗಿದೆ.