Matthew 13:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣ ಬೀಜವಾಗಿದೆ. ಆದರೆ ಅದು ಬೆಳೆದಾಗ ತೋಟದ ಗಿಡಗಳಿಗಿಂತಲೂ ದೊಡ್ಡದಾಗಿರುವುದು. ಅದು ಮರವಾದಾಗ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಮಾಡಿಕೊಳ್ಳುವಷ್ಟು ದೊಡ್ಡದಾಗಿರುತ್ತದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು.
Kannada BSI Bible 2016
ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ, ಬೆಳೆದ ಮೇಲೆ ಕಾಯಿಪಲ್ಯದ ಗಿಡಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ; ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
Kannada Bible (KNCL) BSI 2016
ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡು ಕಟ್ಟಿ ವಾಸಿಸುತ್ತವೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದ್ದರೂ ಅದು ಬೆಳೆದಾಗ, ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು, ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡುತ್ತವೆ.”