Matthew 13:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”
Kannada BSI Bible 2016
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತಕ್ಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.
Kannada Bible (KNCL) BSI 2016
ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.”