Matthew 13:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರವಾದಿ ಹೇಳಿದ್ದ ಈ ಮಾತು ಇದರಿಂದ ನೆರವೇರಿತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.
Kannada BSI Bible 2016
ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ - ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕಾದಿಯಿಂದ ಮರೆಯಾಗಿದ್ದವುಗಳನ್ನು ಹೊರಪಡಿಸುವೆನು ಎಂದು ಒಬ್ಬ ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.
Kannada Bible (KNCL) BSI 2016
“ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.”