Matthew 13:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.
Kannada BSI Bible 2016
ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ಜನರನ್ನು ಬಿಟ್ಟು ಮನೆಗೆ ಹೋದ ಮೇಲೆ ಆತನ ಶಿಷ್ಯರು ಬಂದು - ಹೊಲದಲ್ಲಿಯ ಹಣಜಿಯ ಸಾಮ್ಯದ ಅರ್ಥವನ್ನು ನಮಗೆ ಹೇಳು ಅಂದರು.
Kannada Bible (KNCL) BSI 2016
ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ಮನೆಯೊಳಕ್ಕೆ ಹೋದರು. ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಹೊಲದಲ್ಲಿರುವ ಕಳೆಯ ಸಾಮ್ಯವನ್ನು ನಮಗೆ ವಿವರಿಸಿರಿ,” ಎಂದರು.