Matthew 13:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
Kannada BSI Bible 2016
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ದ್ರವ್ಯಕ್ಕೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಬಿಟ್ಟು ಅದರಿಂದಾದ ಸಂತೋಷದಿಂದ ತನ್ನ ಬದುಕನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
Kannada Bible (KNCL) BSI 2016
“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.