Matthew 13:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆ ಬಲೆಯು ತುಂಬಿಹೋಯಿತು. ಬೆಸ್ತರು ಆ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದು ಒಳ್ಳೆಯ ಮೀನುಗಳನ್ನೆಲ್ಲಾ ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು.
Kannada BSI Bible 2016
ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಟುಬಿಟ್ಟರು.
Kannada Bible (KNCL) BSI 2016
ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಲೆ ತುಂಬಿದಾಗ, ಬೆಸ್ತರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಬುಟ್ಟಿಗಳಲ್ಲಿ ತುಂಬಿಸಿ, ಕೆಟ್ಟವುಗಳನ್ನು ಹೊರಗೆ ಬಿಸಾಡುತ್ತಾರೆ.