Matthew 13:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.
Kannada BSI Bible 2016
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ಅವರಿಗೆ - ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು ಮನೇಯಜಮಾನನಿಗೆ ಹೋಲಿಕೆಯಾಗಿದ್ದಾನೆ. ಅವನು ತನ್ನ ಬೊಕ್ಕಸದೊಳಗಿಂದ ಹೊಸ ವಸ್ತುಗಳನ್ನೂ ಹಳೇ ವಸ್ತುಗಳನ್ನೂ ಹೊರಗೆ ತರುತ್ತಿರುವನು ಎಂದು ಹೇಳಿದನು.
Kannada Bible (KNCL) BSI 2016
ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.