Matthew 13:54 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಸಭಾಮಂದಿರದಲ್ಲಿ ಬೋಧಿಸಿದಾಗ ಜನರು ಬೆರಗಾಗಿ, “ಈ ಜ್ಞಾನವನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವ ಈ ಶಕ್ತಿಯನ್ನು ಎಲ್ಲಿಂದ ಪಡೆದುಕೊಂಡನು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?
Kannada BSI Bible 2016
ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆತನು ತನ್ನ ಊರಿಗೆ ಬಂದು ಅಲ್ಲಿರುವ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಕೇಳಿ ಅತ್ಯಾಶ್ಚರ್ಯಪಟ್ಟು - ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?
Kannada Bible (KNCL) BSI 2016
ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, “ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಅವರಿಗೆ ಬೋಧನೆ ಮಾಡಲು ಪ್ರಾರಂಭಿಸಲು, ಅವರು ವಿಸ್ಮಯಗೊಂಡು, “ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದವು?