Matthew 13:56 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಸಹೋದರಿಯರೆಲ್ಲರೂ ನಮ್ಮಲ್ಲಿ ಇದ್ದಾರೆ. ಹೀಗಿರಲು ಇವನು ಈ ಜ್ಞಾನವನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವ ಈ ಶಕ್ತಿಯನ್ನು ಎಲ್ಲಿಂದ ಪಡೆದುಕೊಂಡನು?” ಎಂದು ಮಾತಾಡಿಕೊಂಡು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?” ಎಂದು ಅಂದುಕೊಂಡು ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು.
Kannada BSI Bible 2016
ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ತಂಗಿಯರೆಲ್ಲರು ನಮ್ಮಲ್ಲಿ ಇದ್ದಾರಲ್ಲವೇ. ಹಾಗಾದರೆ ಇವೆಲ್ಲಾ ಇವನಿಗೆ ಎಲ್ಲಿಂದ ಬಂದಿದ್ದಾವು? ಎಂದು ಮಾತಾಡಿಕೊಂಡು ಆತನ ವಿಷಯವಾಗಿ ಬೇಸರಗೊಂಡರು.
Kannada Bible (KNCL) BSI 2016
ಇವನ ಸೋದರಿಯರೆಲ್ಲಾ ಇಲ್ಲೇ ವಾಸಮಾಡುತ್ತಿಲ್ಲವೇ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು?” ಎಂದು ಮಾತಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈತನ ತಂಗಿಯರೆಲ್ಲರೂ ನಮ್ಮೊಂದಿಗೆ ಇದ್ದಾರಲ್ಲವೇ? ಹಾಗಾದರೆ, ಇವೆಲ್ಲವು ಈತನಿಗೆ ಎಲ್ಲಿಂದ ಬಂದವು?” ಎಂದು ಮಾತನಾಡಿಕೊಂಡರು.