Matthew 13:57 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ. ಯೇಸು ಅವರಿಗೆ, “ಪ್ರವಾದಿಗೆ ಪರಜನರು ಮರ್ಯಾದೆ ಸಲ್ಲಿಸುತ್ತಾರೆ; ಆದರೆ ಸ್ವಂತ ಊರಿನವರಾಗಲಿ ಸ್ವಂತ ಮನೆಯವರಾಗಲಿ ಮರ್ಯಾದೆ ಕೊಡುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೇಸುವು ಅವರಿಗೆ “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು.
Kannada BSI Bible 2016
ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೇಸು ಅವರಿಗೆ - ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಮಾತ್ರ ಮರ್ಯಾದೆಯಿಲ್ಲ ಅಂದನು.
Kannada Bible (KNCL) BSI 2016
ಅವರಿಗೆ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೇಸುವನ್ನು ತಾತ್ಸಾರ ಮಾಡಿದರು. ಆದರೆ ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು.